HomeKarnatakaಪಂಚ ರಾಜ್ಯಗಳ ಮತದಾರರು 'ಕಾಂಗ್ರೆಸ್ ಗ್ಯಾರಂಟಿ' ಭಜನೆಗೆ ಮರುಳಾಗಬೇಡಿ : H. D ಕುಮಾರಸ್ವಾಮಿ

ಪಂಚ ರಾಜ್ಯಗಳ ಮತದಾರರು ‘ಕಾಂಗ್ರೆಸ್ ಗ್ಯಾರಂಟಿ’ ಭಜನೆಗೆ ಮರುಳಾಗಬೇಡಿ : H. D ಕುಮಾರಸ್ವಾಮಿ

ಬೆಂಗಳೂರು : ಪಂಚ ರಾಜ್ಯಗಳ ಮತದಾರರು ಕಾಂಗ್ರೆಸ್ ಗ್ಯಾರಂಟಿ ಭಜನೆಗೆ ಮರುಳಾಗಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ . ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿಯಿದೆ, ಮೊದಲು ಅದನ್ನು ಭರ್ತಿ ಮಾಡಿ ಎಂದು ಕುಮಾರಸ್ವಾಮಿ ಕಿಡಿಕಾರಿದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ ಎಂದರು.

ಇನ್ನೂ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಿಕ್ಕಿಲ್ಲ. ರಾಜ್ಯದಲ್ಲೇ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular