BREAKING: ಮಧ್ಯಪ್ರದೇಶ 230, ಛತ್ತಿಸ್ ಗಢ 70 ಕ್ಷೇತ್ರಗಳಲ್ಲಿ ಮತದಾನ ಆರಂಭ: ಮತದಾನ ಮಾಡಿ ಪ್ರಜಾಪ್ರಭುತ್ವ ಉತ್ಸವದ ಸೌಂದರ್ಯ ಹೆಚ್ಚಿಸಲು ಮೋದಿ ಕರೆ

ನವದೆಹಲಿ: ಪಂಚ ರಾಜ್ಯಗಳ(ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಂ) ವಿಧಾನಸಭೆ ಚುನಾವಣೆಯ ಪೈಕಿ ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಇಂದು ಮತದಾನ ಆರಂಭವಾಗಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಕಣದಲ್ಲಿ 2534 ಅಭ್ಯರ್ಥಿಗಳಿದ್ದು, 5.59 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯಪ್ರದೇಶ ಚುನಾವಣೆಯಲ್ಲಿ ಗೆಲುವಿಗೆ ಭಾರೀ ಕಾರ್ಯತಂತ್ರ ರೂಪಿಸಿವೆ.

230 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಇದೆ. 252 ಮಹಿಳೆಯರು ಕಣದಲ್ಲಿದ್ದಾರೆ. ಚುನಾವಣಾ ಆಯೋಗ ಸುಗಮವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಂಡಿದೆ.

ಛತ್ತೀಸ್ ಗಢದ 70 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, ಮತದಾರರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದಾರೆ. 958 ಅಭ್ಯರ್ಥಿಗಳು ಕಣದಲ್ಲಿದ್ದು, 1.63 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ನಕ್ಸಲ್ ಪೀಡಿತ ಛತ್ತೀಸ್ಗಡದಲ್ಲಿ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಮತ ಚಲಾಯಿಸಲು ಮೋದಿ ಕರೆ

ಇಂದು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಕೊನೆಯ ಸುತ್ತಿನ ಮತದಾನವಾಗಿದೆ. ಎಲ್ಲಾ ಮತದಾರರು ತಮ್ಮ ಹಕ್ಕು ಚಲಾಯಿಸಲು ನಾನು ವಿನಂತಿಸುತ್ತೇನೆ. ನಿಮ್ಮ ಪ್ರತಿ ಮತವೂ ಪ್ರಜಾಪ್ರಭುತ್ವಕ್ಕೆ ಅಮೂಲ್ಯ. ಮತದಾನ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಇಂದು ಮಧ್ಯಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ರಾಜ್ಯದ ಪ್ರತಿಯೊಂದು ಪ್ರದೇಶದ ಮತದಾರರು ಉತ್ಸಾಹದಿಂದ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಈ ಮಹಾನ್ ಉತ್ಸವದ ಸೌಂದರ್ಯವನ್ನು ಹೆಚ್ಚಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ಈ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಿದ ರಾಜ್ಯದ ಎಲ್ಲಾ ಯುವಕರಿಗೆ ನನ್ನ ವಿಶೇಷ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.

https://twitter.com/ani_digital/status/1725334997903524200

https://twitter.com/narendramodi/status/1725326131493240848

https://twitter.com/narendramodi/status/1725326593646837858

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read