HomeKarnatakaವೇತನ ಹೆಚ್ಚಳ ಸಭೆ ವಿಫಲ: ಮೇ 20 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಘೋಷಣೆ

ವೇತನ ಹೆಚ್ಚಳ ಸಭೆ ವಿಫಲ: ಮೇ 20 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಘೋಷಣೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಬುಧವಾರ ನಡೆದ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಸಮಿತಿ ಘೋಷಿಸಿದೆ.

ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶ ಜಾರಿ ಕುರಿತಾಗಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರೊಂದಿಗೆ ಈ ಹಿಂದೆ ಮೂರು ಸಭೆಗಳನ್ನು ನಡೆಸಲಾಗಿತ್ತು. 2025 ಏಪ್ರಿಲ್ 1ರಿಂದ ಅನ್ವಯವಾಗುವಂತೆ ನಾಲ್ಕು ನಿಗಮಗಳ ನೌಕರರಿಗೆ ಶೇಕಡ 7ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಆದರೆ ನೌಕರರ ಸಂಘಟನೆಯ ಪ್ರಮುಖರು ಕೆಎಸ್ಆರ್ಟಿಸಿ ಅಧಿಕಾರಿಗಳು ನೀಡಿದ್ದ ಪ್ರಸ್ತಾವನೆ ಒಪ್ಪಿಲ್ಲ. ಶೇಕಡ 25ರಷ್ಟು ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಬುಧವಾರ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಸಭೆ ನಡೆಸಿದ್ದು, 2024ರ ಜನವರಿ 1ರಿಂದ ಅನ್ವಯವಾಗುವಂತೆ ಶೇಕಡ 25 ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಂದಿನ ಘೋಷಣೆ ಮಾಡುವುದಾಗಿ ಸಚಿವರು ಹೇಳಿದ್ದು, ಇದಕ್ಕೆ ಒಪ್ಪದ ನೌಕರರ ಸಂಘಟನೆಯವರು ಸಭೆಯಲ್ಲೇ ಈ ಬಗ್ಗೆ ಘೋಷಣೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ವೇತನ ಹೆಚ್ಚಳದ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular