HomeKarnatakaವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ.

ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು, ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ಎಲ್ಲ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಸೇರಿ ಎಲ್ಲಾ ಕಾರ್ಯಕರ್ತರು, ಎಲ್ಲಾ ಹಂತದ ನಾಯಕರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular