HomeJobsಚಿತ್ರದುರ್ಗದಲ್ಲಿ ಮಾರ್ಚ್ 11ರಂದು ನೇರ ಸಂದರ್ಶನ

ಚಿತ್ರದುರ್ಗದಲ್ಲಿ ಮಾರ್ಚ್ 11ರಂದು ನೇರ ಸಂದರ್ಶನ

ಚಿತ್ರದುರ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಒಂದಿದೆ. ಮಾರ್ಚ್ 11ರಂದು ಬೋಧಕ ಹುದ್ದೆಗಳ ನೇಮಕಾತಿಗಾಗಿ ಚಿತ್ರದುರ್ಗದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಚಿತ್ರದುರ್ಗ ನಗರದ ಹಳೆ ಬೆಂಗಳೂರು ರಸ್ತೆಯಲ್ಲಿರುವ ಜಿ.ಟಿ.ಟಿ.ಸಿ ಕಟ್ಟಡದಲ್ಲಿರುವ ಎನ್.ಐ.ಇ.ಎಲ್.ಐ.ಟಿ (ನ್ಯಾಷಿನಲ್ ಇನ್ಸಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರಮೇಷನ್ ಟೆಕ್ನಾಲಜಿ) ಎಕ್ಸ್‍ಟೆನ್ಶನ್ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.

ಮಾರ್ಚ್ 11ರಂದು ಬೆಳಗ್ಗೆ 9 ಗಂಟೆಗೆ ಒಪ್ಪಂದದ ಆಧಾರದ ಮೇಲೆ ಎರಡು ಬೋಧಕ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಆಸಕ್ತರು ವೆಬ್‍ಸೈಟ್ www.nielit.gov.in/calicut ಭೇಟಿ ನೀಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಐಟಿ ವಿಷಯದಲ್ಲಿ ಬಿಇ, ಬಿ-ಟೆಕ್, ಸ್ನಾತಕೋತ್ತರ ಪದವಿ, ಎಂ.ಸಿ.ಎ. ಅಥವಾ ಬಿಸಿಎ ಪದವಿಗಳಲ್ಲಿ ವಿದ್ಯಾರ್ಹತೆ ಹೊಂದಿರುವವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತರು ಇತ್ತೀಚಿನ ಬಯೋಡೇಟಾ, ವಿದ್ಯಾಭ್ಯಾಸದ ಸ್ವಯಂ-ದೃಢೀಕೃತ ಪ್ರತಿ ಹಾಗೂ ಎಲ್ಲಾ ಮೂಲ ದಾಖಲೆಗಳ ಒಂದು ಸೆಟ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ ಡಾ.ರಾಣಾಶರ್ಮಾ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9864020005, 9995427802.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular