ರಾಯಚೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಮಾರ್ಚ್ 27ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಪಾಲ್ಗೊಳ್ಳಬಹುದು.
ಕರ್ನಾಟಕ ಸರ್ಕಾರ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ, ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಜಂಟಿಯಾಗಿ ನೇರ ಸಂದರ್ಶನ ಆಯೋಜನೆ ಮಾಡಿದ್ದು, ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎರಡು ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ. ಪದವೀಧರರು ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 30 ವರ್ಷಗಳು. ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರ ತರಬೇಕು.
ನೇರ ಸಂದರ್ಶನ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಯಾವುದೇ ಭತ್ಯೆ ನೀಡುವುದಿಲ್ಲ. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸದರಿ ಸಂದರ್ಶನಕ್ಕೆ ಹಾಜರಾಗಬೇಕು.
ವಿಳಾಸ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬಾಲಾಜಿ ಕಾಂಪ್ಲೇಕ್ಸ್ ಸ್ಟೇಷನ್ ಏರಿಯ ಗೂಡ್ ಶೆಡ್ ರಸ್ತೆ ರಾಯಚೂರು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 08532-231684, 9008211750 & 9916931616.

