HomeJobsಬಳ್ಳಾರಿಯಲ್ಲಿ ಮಾರ್ಚ್ 13ರಂದು ನೇರ ಸಂದರ್ಶನ

ಬಳ್ಳಾರಿಯಲ್ಲಿ ಮಾರ್ಚ್ 13ರಂದು ನೇರ ಸಂದರ್ಶನ

ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 13ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಈ ಸಂದರ್ಶನದಲ್ಲಿ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ.

ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ರೀಡ್ಸ್, ಟೋಯೋಟಾ, ಕಿಯಾ, ಫೋಕ್ಸ್ಕಾನ್, ಐ ಫೋನ್ ಮತ್ತು ಎಲ್‌ಐಸಿ ಕಂಪನಿಗಳು ಭಾಗವಹಿಸಲಿವೆ. ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಗಳೊಂದಿಗೆ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಿ. ಹೆಚ್ಚಿನ ಮಾಹಿತಿಗಾಗಿ 7619207762, 9663263086, 7676774293, 6360408094 ಸಂಖ್ಯೆಗೆ ಕರೆ ಮಾಡಿ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular