ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದೊಂದಿಗೆ ಕರ್ನಾಟಕ ವ್ಯವಸಾಯ ವೃತ್ತಿಪರ ಯೂನಿಯನ್ ಸಂಸ್ಥೆಯ ವತಿಯಿಂದ ತಮ್ಮಲ್ಲಿ ಖಾಲಿ ಇರುವ 06 ಹುದ್ದೆಗಳ ಭರ್ತಿಗಾಗಿ ಆಗಸ್ಟ್ 06 ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
*ಸಂದರ್ಶನ ನಡೆಯುವ ಸ್ಥಳ
ರೀಡ್ಸ್ ಸಂಸ್ಥೆ, ಡಿ.ನಂ.ಸಿ-17, 2ನೇಯ ಮಹಡಿ, ಶ್ರೀ ರ್ರಿತಾತ ಕಾಲೋನಿ, ಗಾಂಧಿನಗರ, ಬಳ್ಳಾರಿ, ಇಲ್ಲಿ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯುವ ನೇರ ಸಂದರ್ಶನದಲ್ಲಿ ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನ ಸ್ಥಳದಲ್ಲಿ ಹಾಜರಿರಬೇಕು.ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಯೂನಿಯನ್ ಸಂಸ್ಥೆಯ ಜೊತೆಗೆ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸಲು ಮಹಿಳೆಯರು ಮತ್ತು ಪುರುಷರೊಂದಿಗೆ ಕಾರ್ಯನಿರ್ವಹಿಸಲು ಆಸಕ್ತ 21 ರಿಂದ 35 ವರ್ಷ ವಯೋಮಿತಿಯ ಮಹಿಳೆಯರು ಮಾತ್ರ ಭಾಗವಹಿಸಬಹುದು.
ಸಂದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾಗಿ ಕನಿಷ್ಠ 2 ವರ್ಷ ಸಮುದಾಯದ ಅಭಿವೃದ್ಧಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.7619207762 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಯೋಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠ ರಾಜ್ಯ ಪ್ರಶಸ್ತಿಗೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ/ಸಲ್ಲಿಸಿರುವ ಅರ್ಹ ಹಿರಿಯ ನಾಗರಿಕರಿಂದ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಆಗಸ್ಟ್ 30 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣ: 080-29752324 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

