ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವ್ ಅನ್ನು ಅಕ್ಟೋಬರ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಪಿ.ಯು.ಸಿ ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಭಾಗವಹಿಸಬಹುದು. 18 ರಿಂದ 30 ವರ್ಷದ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗೃಹರಕ್ಷಕದಳದಲ್ಲಿ ಖಾಲಿ ಇರುವ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು (ಮಹಿಳೆ/ಪುರುಷ) ಪದವಿ ವಿದ್ಯಾರ್ಹತೆ ಹೊಂದಿರಬೇಕು. ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡಿರಬಾರದು, ರಾಜಕೀಯ ಕೆಲಸ ಕಾರ್ಯಗಳಲ್ಲಿ ತೊಡಗಿರಬಾರದು. ಯಾವುದೇ ಅಪರಾಧಿಕ ಹಿನ್ನೆಲೆ ಹೊಂದಿರಬಾರದು. ಕೇಂದ್ರಸ್ಥಾನದ 20 ಕಿ.ಮೀ ವ್ಯಾಪ್ತಿಯೊಳಗೆ ವಾಸವಿರಬೇಕು. ದೈಹಿಕ ದಾರ್ಢ್ಯತೆ ಹಾಗೂ ಆರೋಗ್ಯದ ಬಗ್ಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ವೈದ್ಯಕೀಯ ಪ್ರಮಾಣ ಸಲ್ಲಿಸಬೇಕು. ಸೇನಾಪಡೆ, ಅರೆ ಸೇನಾಪಡೆ, ಪೊಲೀಸ್ ಇಲಾಖೆಗಳಲ್ಲಿ ಕನಿಷ್ಠ 5 ವರ್ಷಗಳ ತೃಪ್ತಿದಾಯಕ ಸೇವಾ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 50 ವರ್ಷ ಮೀರಿರಬಾರದು. ಶೌರ್ಯ ಪ್ರಶಸ್ತಿ ಪುರಸ್ಕೃತರು, ಎನ್ಸಿಸಿ ಪ್ರಮಾಣಪತ್ರ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ರಾಜ್ಯ ಸರ್ಕಾರದ ಇಚ್ಛೆಗೆ ಒಳಪಟ್ಟು, ಕಮಾಂಡೆಂಟ್ ಗಳ ಅಧಿಕಾರಾವಧಿಯು ಸಾಮಾನ್ಯವಾಗಿ ಐದು ವರ್ಷಗಳ ಅವಧಿಯದ್ದಾಗಿರುತ್ತದೆ. ಕಮಾಂಡೆಂಟ್ ಅವರು ವೈದ್ಯಕೀಯವಾಗಿ ಅಥವಾ ದೈಹಿಕವಾಗಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರಾಗಿದ್ದರೆ, ಹುದ್ದೆಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದರೆ, ಕ್ರಿಮಿನಲ್ ಅಪರಾಧದಲ್ಲಿ ಭಾಗಿಯಾಗಿದ್ದರೆ, ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ, ಅಧಿಕೃತ ಹುದ್ದೆ ಮತ್ತು ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿದ್ದರೆ ಅಥವಾ ಆರ್ಥಿಕ ಅಕ್ರಮಗಳಲ್ಲಿ ಭಾಗಿಯಾಗಿದ್ದರೆ, ಅವರನ್ನು ಹುದ್ದೆಯಿಂದ ವಜಾಗೊಳಿಸಲು ಮಹಾನಿರ್ದೇಶಕರು ಮತ್ತು ಕಮಾಂಡೆAಟ್ ಜನರಲ್ ಅವರು ಸರ್ಕಾರಕ್ಕೆ ಶಿಫಾರಸು ಮಾಡಬಹುದು.
ಈ ಹುದ್ದೆಗೆ ಯಾವುದೇ ವೇತನ ಇರುವುದಿಲ್ಲ. ಈ ಹುದ್ದೆಯು ಸಂಪೂರ್ಣವಾಗಿ ಗೌರವ (ಸ್ವಯಂಪ್ರೇರಿತ ಸೇವಾ ಆಧಾರದ ಮೇಲೆ) ಹುದ್ದೆಯಾಗಿದೆ.
ಆಸಕ್ತ ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು ಜನ್ಮ ದಿನಾಂಕ, ಶೈಕ್ಷಣಿಕ ಅರ್ಹತೆ, ವಿಳಾಸ, ದೂರವಾಣಿ ಸಂಖ್ಯೆಗಳನ್ನು ಭರ್ತಿ ಮಾಡಿ, ಅಗತ್ಯ ಪ್ರಮಾಣೀಕೃತ ದಾಖಲೆಗಳ (ಅಟೆಸ್ಟೆಡ್ ಕಾಪಿ) ಪ್ರತಿಗಳೊಂದಿಗೆ ಬಯೋಡೇಟಾ, ಜೊತೆಗೆ ಸ್ಥಳೀಯ ಗೌರವಾನ್ವಿತ ವ್ಯಕ್ತಿಗಳಿಂದ 2 ಉಲ್ಲೇಖಗಳು (ರೆಫರೆನ್ಸ್) ಮತ್ತು ಕಚೇರಿಯ ಮುಖ್ಯಸ್ಥರಿಂದ (ಉದ್ಯೋಗದಲ್ಲಿದ್ದರೆ) ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆ ಅವರಿಗೆ ಅಕ್ಟೋಬರ್ 30 ರೊಳಗೆ ಸಲ್ಲಿಸಬೇಕು.
ಒಂದು ಪ್ರತಿಯನ್ನು ಪೊಲೀಸ್ ಉಪಾಯುಕ್ತರು, ಕೊಪ್ಪಳ ಮತ್ತು ಡಿಐಜಿಪಿ, ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಇವರಿಗೆ (ಎರಡೂ ಕೇವಲ ಮಾಹಿತಿಗಾಗಿ/ಉಲ್ಲೇಖಕ್ಕಾಗಿ) ಕಳುಹಿಸಬೇಕು. ನಿಗದಿತ ದಿನಾಂಕದ ನಂತರ ಸ್ವೀಕರಿಸಿದ ಅರ್ಜಿಗಳನ್ನು ಹಾಗೂ ನೇರವಾಗಿ ಈ ಕಚೇರಿಗೆ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

