HomeLatest NewsBREAKING NEWS: ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ

BREAKING NEWS: ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಪೂರ್ಣ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಯಾವುದೇ ನೇಮಕಾತಿ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರದಿಸಿದೆ.

ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ. ಮುಂದಿನ ವಿಚಾರಣೆ ಮುಗಿಯುವವರೆಗೂ ಹೊಸ ತಿದ್ದುಪಡಿ ಕಾಯ್ದೆಯಡಿ ವಕ್ಫ್ ಮಂಡಳಿಗೆ ಯಾವುದೇ ನೇಮಕಾತಿ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಏಳು ದಿನಗಳ ಒಳಗಾಗಿ ಉತ್ತರ ನೀಡಬೇಕು. ಸಂಬಂಧಿಸಿದ ದಾಖಲೆ ಸಲ್ಲಿಸಲು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ಮುಂದೂಡಲಾಗಿದೆ.

ಮುಂದಿನ ವಿಚಾರಣೆಯಲ್ಲಿ 5 ಅರ್ಜಿದಾರರ ವಾದ ಆಲಿಸುತ್ತೇವೆ. 5 ಅರ್ಜಿದಾರರು ಯಾರು ಎಂದು ನೀವೇ ಆಯ್ಕೆ ಮಾಡಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ

For Latest News Updates, Join Our Whatsapp Community🚩
RELATED ARTICLES

Most Popular