HomeKarnatakaBIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ...

BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ವಕ್ಫ್ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ.

ವಕ್ಫ್ ನೋಂದಣಿ ವಿರುದ್ಧ ಬಿಜೆಪಿ ಸಂಸದ, ವಕ್ಫ್ ಕಾಯ್ದೆ ತಿದ್ದುಪಡಿ ಕುರಿತ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ, ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಕೇವಲ ನೋಟಿಸ್ ಹಿಂಪಡದರೆ ಸಾಲದು ಪಹಣಿಯಲ್ಲಿನ ನೋಂದಣಿಯೂ ತಿದ್ದುಪಡಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸೋಮವಾರ ತೇಜಸ್ವಿ ಸೂರ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ರೈತರ ಪಹಣಿಯಲ್ಲಿ ವಕ್ಫ್ ಎಂದು ನೋಂದಣಿ ಮಾಡಿರುವುದು, ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ತೇಜಸ್ವಿ ಸೂರ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular