ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡ್ರಗ್ಸ್ ಪೂರೈಸಲು ಯತ್ನಿಸಿದ ಆರೋಪದ ಮೇಲೆ ವಾರ್ಡನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ವಾರ್ಡನ್ ಪ್ರಕಾಶ್ ಗಾವಡೆ ಬಂಧಿತ ಆರೋಪಿ. ಇತ್ತೀಚೆಗೆ ಕರ್ತವ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಪ್ರಕಾಶ್ ನನ್ನು ಕಾರಾಗೃಹ ಪ್ರವೇಶದ್ವಾರದಲ್ಲಿ ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ ಪ್ರಕಾಶ್ ಬಳಿ ಡ್ರಗ್ಸ್ ಪತ್ತೆಯಾಗಿದೆ. ಕಾರಾಗೃಹದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕಾಶ್ ನನ್ನು ಬಂಧಿಸಿದ್ದಾರೆ.
ಅನೇಕ ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಕಾಶ್ ಕೆಲಸ ಮಾಡುತ್ತಿದ್ದು, ಫೆಬ್ರವರಿ 9ರಂದು ಎಂದಿನಂತೆ 6:15ರ ಸುಮಾರಿಗೆ ಕೆಲಸಕ್ಕೆ ಹಾಜರಾಗಲು ಸಮವಸ್ತ್ರದಲ್ಲಿ ಆಗಮಿಸಿದ್ದಾನೆ. ಪ್ರವೇಶ ದ್ವಾರದಲ್ಲಿ ಪ್ರಕಾಶ್ ನನ್ನು ತಪಾಸಣೆಗೆ ಒಳಪಡಿಸಿದಾಗ ಒಳ ಉಡುಪಿನಲ್ಲಿ ಗಾಂಜಾ ಸೇದುವ ಒಳಗೆ ಕೊಳವೆ, ಪ್ಲಾಸ್ಟಿಕ್ ಪೇಪರ್ ನಲ್ಲಿ ಸುತ್ತಿಡಲಾಗಿದ್ದ ಗಾಂಜಾ ಮತ್ತು 15 ಗ್ರಾಂ ಮೆಥಾಂಫೆಟಮೈನ್ ಡ್ರಗ್ಸ್ ದೊರೆತಿದೆ.
ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿರುವ ಪೊಲೀಸರು ಆರೋಪಿ ಯಾರಿಗೆ ಡ್ರಗ್ಸ್ ಕೊಡಲು ತೆಗೆದುಕೊಂಡು ಹೋಗುತ್ತಿದ್ದ ಎನ್ನುವುದರ ಕುರಿತಾಗಿ ತನಿಖೆ ನಡೆಸಲಾಗಿದೆ.

