ರಜೆ ಪಡೆಯದೆ ಅನಧಿಕೃತವಾಗಿ ಗೈರುಹಾಜರಾಗುವ ಅಧಿಕಾರಿಗಳು, ನೌಕರರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಜೆ ಪಡೆಯದೇ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿದಂತೆ. ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಧಾನ ಪರಿಷತ್ ಅಧೀನ ಕಾರ್ಯದರ್ಶಿ ಜ್ಯೋತಿ ಸುತ್ತೋಲೆ ಹೊರಡಿಸಿದ್ದಾರೆ.

ವಿಧಾನ ಪರಿಷತ್ ಸಚಿವಾಲಯದ ಅಧಿಕಾರಿಗಳು, ನೌಕರರು ಕಚೇರಿಗೆ ಅನಧಿಕೃತವಾಗಿ ಗೈರು ಹಾಜರಾದಲ್ಲಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಜೆ ಪಡೆಯದೆ ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾಗುವುದು ದುರ್ನಡತೆ ತೋರಿದಂತೆ. ಅಂತಹ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು. ಉದ್ಯೋಗಕ್ಕೆ ಹಾಜರಾಗಬೇಕಾದ ಸಮಯದಲ್ಲಿ ಸಕಾರಣವಿಲ್ಲದೆ ಗೈರು ಹಾಜರಾಗಬಾರದು ಎಂಬ ಹೊಣೆಗಾರಿಕೆ ಉದ್ಯೋಗಿಗಳ ಮೇಲಿರುತ್ತದೆ. ರಜೆ ಮಂಜೂರಾಗದೆ ಗೈರಾಗುವುದನ್ನು ಹಕ್ಕು ಎಂದು ಉದ್ಯೋಗಿಗಳು ಪರಿಗಣಿಸಬಾರದು. ಕಚೇರಿಗೆ ಅನಧಿಕೃತವಾಗಿ ಗೈರಾಗುವ ತಪ್ಪಿತಸ್ಥ ಉದ್ಯೋಗಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದು ಸಮರ್ಥನೀಯವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸಚಿವಾಲಯದ ಎಲ್ಲಾ ಅಧಿಕಾರಿಗಳು, ನೌಕರರು ರಜೆ ಮೇಲೆ ತೆರಳುವ ಮೊದಲು ಕಡ್ಡಾಯವಾಗಿ ಮೇಲಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read