HomeKarnatakaಹುಟ್ಟುಹಬ್ಬದ ಪಾರ್ಟಿಗೆ ಕರೆದು ಯುವತಿಯನ್ನು ಹತ್ಯೆ ಮಾಡಿದರಾ ? ಮಂಡ್ಯ ಕಾರು ಅಪಘಾತದ ಹಿಂದೆ ಅತ್ಯಾಚಾರ...

ಹುಟ್ಟುಹಬ್ಬದ ಪಾರ್ಟಿಗೆ ಕರೆದು ಯುವತಿಯನ್ನು ಹತ್ಯೆ ಮಾಡಿದರಾ ? ಮಂಡ್ಯ ಕಾರು ಅಪಘಾತದ ಹಿಂದೆ ಅತ್ಯಾಚಾರ ಯತ್ನದ ಶಂಕೆ !

ಮಂಡ್ಯ : ಹುಟ್ಟುಹಬ್ಬದ ಆಚರಣೆಗೆಂದು ಸ್ನೇಹಿತರು ಕರೆದೊಯ್ದಿದ್ದ ಯುವತಿ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಅನುಮಾನಗಳಿಗೆ ಕಾರಣವಾಗಿದೆ. ಇದು ಸಾಮಾನ್ಯ ರಸ್ತೆ ಅಪಘಾತವಲ್ಲ, ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಳಿಕ ಕೊಲೆ ಮಾಡಲಾಗಿದೆ ಎಂದು ಮೃತ ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ತೆರಳಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಸಂಚಲನ ಮೂಡಿಸಿದೆ. ಆರಂಭದಲ್ಲಿ ಇದನ್ನು ರಸ್ತೆ ಅಪಘಾತ ಎಂದು ಹೇಳಲಾಗಿದ್ದರೂ, ಮೃತಳ ಕುಟುಂಬಸ್ಥರು ಇದನ್ನು ಒಪ್ಪಲು ನಿರಾಕರಿಸಿದ್ದಾರೆ.ಮಂಡ್ಯ ನಗರದ ಪಿಜಿಯಲ್ಲಿ ವಾಸವಿದ್ದ ಹೊನ್ನೆಮಡು ಗ್ರಾಮ 10 ವರ್ಷದ ನವೀನಾ ಮೃತ ಯುವತಿ. ಆ.2 ರಂದು ನವೀನಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಮನೆಗೆ ಹೋಗುವುದಾಗಿ ಪಿಜಿ ಮಾಲೀಕರಿಗೆ ತಿಳಿಸಿದ್ದ ನವೀನಾ ತನ್ನ ಸ್ನೇಹಿತರಾದ ಅಶ್ವಿನಿ, ವಿಷ್ಣು ಹಾಗೂ ಶಿವಕುಮಾರ್ ಜೊತೆ ಕೊಮ್ಮೇರಹಳ್ಳಿ ಬೆಟ್ಟಕ್ಕೆ ಕಾರಿನಲ್ಲಿ ತೆರಳಿದ್ದರು. ಈ ವೇಖೆ ಕಾರು ಅಪಘಾತಕ್ಕೀಡಾಗಿ ನವೀನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಉಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತದ ಬಗ್ಗೆ ರಾತ್ರಿ 11 ಗಂಟೆಯ ಸುಮಾರಿಗೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಯುವತಿಯ ಪೋಷಕರ ಪ್ರಕಾರ, ಮಗಳನ್ನು ಹುಟ್ಟುಹಬ್ಬದ ಪಾರ್ಟಿಗೆ ಆಹ್ವಾನಿಸಿ ಕರೆದೊಯ್ದ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಕೊಲೆ ಮಾಡಿ ಅದನ್ನು ಕಾರು ಅಪಘಾತದ ರೂಪದಲ್ಲಿ ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಯುವತಿಯ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದು, ಪ್ರಕರಣವನ್ನು ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ದೃಷ್ಟಿಯಿಂದಲೂ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.ಈ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದವರ ಹೇಳಿಕೆ, ಸಿಸಿಟಿವಿ ದೃಶ್ಯಗಳು, ಮೊಬೈಲ್ ಕರೆ ವಿವರಗಳು ಹಾಗೂ ವೈದ್ಯಕೀಯ ವರದಿಗಳನ್ನು ಆಧರಿಸಿ ಸಮಗ್ರ ತನಿಖೆ ಮುಂದುವರಿದಿದೆ. ಆರೋಪಗಳು ಸಾಬೀತಾಗುವವರೆಗೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಸಾವಿನ ಹಿಂದೆ ಅಪಘಾತವೇ ಅಥವಾ ದುಷ್ಕೃತ್ಯವೇ ಎಂಬ ಪ್ರಶ್ನೆಗೆ ತನಿಖೆಯ ಬಳಿಕವೇ ಸ್ಪಷ್ಟ ಉತ್ತರ ಸಿಗಲಿದೆ. ಕುಟುಂಬಸ್ಥರ ಆರೋಪಗಳು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಸತ್ಯ ಹೊರಬರಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular