ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಅವರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಜನಪ್ರಿಯ ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮತ್ತು ಟಿ 20 ವಿಶ್ವಕಪ್ ಚಾಂಪಿಯನ್ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಗಿಯಾನಿ ಇನ್ಫಾಂಟಿನೊ ನೃತ್ಯ ಮಾಡಿದರು.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ, ಇನ್ಫಾಂಟಿನೊ ಪಂಜಾಬಿ ಗಾಯಕ ಎಪಿ ಧಿಲ್ಲಾನ್ ಅವರ ಹಾಡುಗಳಿಗೆ ಕುಣಿಯುತ್ತಿರುವುದನ್ನು ನೋಡಬಹುದಾಗಿದೆ. ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಿದ ಜನಪ್ರಿಯ ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಇನ್ಫಾಂಟಿನೊ ಕೂಡ ಒಬ್ಬರು.
ಮದುವೆಯಲ್ಲಿ ಸೂಪರ್ ಮಾಡೆಲ್ ಕಿಮ್ ಕಾರ್ದಶಿಯಾನ್, ಹಾಲಿವುಡ್ ನಟ ಮತ್ತು ಡಬ್ಲ್ಯುಡಬ್ಲ್ಯುಇ ಕುಸ್ತಿಪಟು ಜಾನ್ ಸೆನಾ ಮತ್ತು ಮಾಜಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಭಾಗವಹಿಸಿದ್ದರು.
https://twitter.com/i/status/1811869241257394494
https://twitter.com/i/status/1811796984858136820
https://twitter.com/i/status/1811803435605397910