BIG NEWS: ಅಂತಿಮ ಹಂತಕ್ಕೆ ಬಜೆಟ್ ತಯಾರಿ: ಹಲ್ವಾ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿ

ನವದೆಹಲಿ: ಮಧ್ಯಂತರ ಕೇಂದ್ರ ಬಜೆಟ್ 2024 ರ ಬಜೆಟ್ ತಯಾರಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವ ‘ಹಲ್ವಾ’ ಸಮಾರಂಭದಲ್ಲಿ ಬುಧವಾರ ಭಾಗವಹಿಸಿದ್ದರು.

ಹಲ್ವಾ ಸಮಾರಂಭದಲ್ಲಿ ಹಣಕಾಸು ಸಚಿವರೊಂದಿಗೆ ಹಣಕಾಸು ಕಾರ್ಯದರ್ಶಿ ಮತ್ತು ವೆಚ್ಚ ಕಾರ್ಯದರ್ಶಿ ಟಿ.ವಿ. ಸೋಮನಾಥನ್, ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಯ್ ಸೇಠ್, DIPAM ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ, ಕೇಂದ್ರದ ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ, ಬೋರ್ಡ್ ಫಾರ್ ಡೈರೆಕ್ಟ್ ಟ್ಯಾಕ್ಸ್(CBDT) ಅಧ್ಯಕ್ಷರು ನಿತಿನ್ ಗುಪ್ತಾ, ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಕೇಂದ್ರೀಯ ಮಂಡಳಿ(CBIC)ಯ ಸಂಜಯ್ ಕುಮಾರ್ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಬಜೆಟ್ ತಯಾರಿಕೆಯ “ಲಾಕ್-ಇನ್” ಪ್ರಕ್ರಿಯೆಯು ಪ್ರಾರಂಭವಾಗುವ ಮೊದಲು ಸಾಂಪ್ರದಾಯಿಕ ಹಲ್ವಾ ಸಮಾರಂಭವನ್ನು ಪ್ರತಿ ವರ್ಷ ನಡೆಸಲಾಗುತ್ತದೆ.

ಹಿಂದಿನ ಮೂರು ಪೂರ್ಣ ಕೇಂದ್ರ ಬಜೆಟ್‌ಗಳಂತೆ, ಮಧ್ಯಂತರ ಯೂನಿಯನ್ ಬಜೆಟ್ 2024 ಅನ್ನು ಸಹ ಕಾಗದರಹಿತ ರೂಪದಲ್ಲಿ ವಿತರಿಸಲಾಗುತ್ತದೆ. ಇದನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಡಾಕ್ಯುಮೆಂಟ್‌ಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪ್ರಕಟಿಸಲಾಗುವುದು ಮತ್ತು Android ಮತ್ತು iOS ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತದೆ. ಯೂನಿಯನ್ ಬಜೆಟ್ ವೆಬ್ ಪೋರ್ಟಲ್‌ನಿಂದಲೂ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು.

ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಹಣಕಾಸು ಸಚಿವರು ಬಜೆಟ್ ಭಾಷಣವನ್ನು ಪೂರ್ಣಗೊಳಿಸಿದ ನಂತರ ಬಜೆಟ್ ದಾಖಲೆಗಳು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ.

https://twitter.com/ANI/status/1750161072726696372

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read