Shocking Video: ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ

ತಮಿಳುನಾಡಿನ ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

ರಾತ್ರಿ 12:45 ರ ಸುಮಾರಿಗೆ ಈ ಘಟನೆ ನಡೆದಿದ್ದು, ಯುವತಿಯರು ಹಾಸ್ಟೆಲ್‌ಗೆ ಹಿಂತಿರುಗುತ್ತಿದ್ದಾಗ ಈ ವ್ಯಕ್ತಿ, ಅವರನ್ನು ಹಿಂಬಾಲಿಸಿದ್ದಾನೆ. ನಂತರ ಹಾಸ್ಟೆಲ್ ಪ್ರವೇಶಿಸಲು ಯತ್ನಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಯುವತಿಯರು ಕೂಗಿಕೊಂಡಾಗ, ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದು, ನೆರೆಹೊರೆಯವರು ಗಾಯಗೊಂಡ ಭದ್ರತಾ ಸಿಬ್ಬಂದಿಗೆ ಸಹಾಯ ಮಾಡಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿಗೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಸ್ಟೆಲ್ ಮಾಲೀಕರು ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಆದರೆ ಯಾರೊಬ್ಬರೂ ಪ್ರತಿಕ್ರಿಯಿಸಲಿಲ್ಲ ಎಂದು ಆರೋಪಿಸಲಾಗಿದೆ.

ಈ ಘಟನೆಯು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ, ಪೊಲೀಸರ ವಿಳಂಬ ಪ್ರತಿಕ್ರಿಯೆಯನ್ನು ಹಲವರು ಪ್ರಶ್ನಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಇದರಲ್ಲಿ ದುಷ್ಕರ್ಮಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಹಾಸ್ಟೆಲ್ ಪ್ರವೇಶಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ.

ಭಯದಿಂದ ಯುವತಿಯರು ಕಿರುಚಾಡುತ್ತಾ ಓಡಿಹೋಗುವ ದೃಶ್ಯವೂ ಇದರಲ್ಲಿ ಸೆರೆಯಾಗಿದೆ. ಕೊಯಂಬತ್ತೂರು ಹಾಸ್ಟೆಲ್ ಮಾಲೀಕರ ಸಂಘವು ಸರವಣಂಪಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ, ಆದರೆ ಇನ್ನೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಸಂಘವು ಈಗ ಕೊಯಂಬತ್ತೂರು ಮುನ್ಸಿಪಲ್ ಕಮಿಷನರ್ ಅವರನ್ನು ಸಂಪರ್ಕಿಸಿ, ಅಪರಾಧಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಪ್ರದೇಶದ ಮಹಿಳಾ ಹಾಸ್ಟೆಲ್‌ಗಳಿಗೆ ಭದ್ರತಾ ಕ್ರಮಗಳನ್ನು ಸುಧಾರಿಸುವಂತೆ ಕೋರಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read