ಇಬ್ಬರು ಯುವತಿಯರನ್ನ ಬೈಕ್ ಮೇಲೆ ಕೂರಿಸಿಕೊಂಡು ಯವಕನೊಬ್ಬ ಬೈಕ್ ಸ್ಟಂಟ್ ಮಾಡುತ್ತಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೂವರು ಅಪರಿಚಿತರು ಬೈಕ್ ಸ್ಟಂಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂವರ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಬಿಕೆಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿಗಳ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ, ನೀವು ನೇರವಾಗಿ ನಮಗೆ ಮಾಹಿತಿ ನೀಡಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ವೀಡಿಯೋದಲ್ಲಿ ಓರ್ವ ಯುವಕ ಬೈಕ್ ಮೇಲೆ ಕೂತಿದ್ದು ತನ್ನ ಹಿಂದೆ, ಮುಂದೆ ಯುವತಿಯರನ್ನ ಕೂರಿಸಿಕೊಂಡು ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ್ದಾನೆ.
https://twitter.com/PotholeWarriors/status/1641368172619268096?ref_src=twsrc%5Etfw%7Ctwcamp%5Etweetembed%7Ctwterm%5E1641368172619268096%7Ctwgr%5E0757b50e13209b66cf18b41a1c1fb2477e1c20c2%7Ctwcon%5Es1_&ref_url=https%3A%2F%2Fwww.freepressjournal.in%2Fmumbai%2Fmumbai-man-performs-wheelie-with-2-woman-on-bike-in-bkc-case-registered