HomeIndiaShocking Video: ಚಲಿಸುತ್ತಿದ್ದ ರೈಲಿನಲ್ಲಿ ಗಾಂಜಾ ಸೇವಿಸಿದ ಯುವತಿ....!

Shocking Video: ಚಲಿಸುತ್ತಿದ್ದ ರೈಲಿನಲ್ಲಿ ಗಾಂಜಾ ಸೇವಿಸಿದ ಯುವತಿ….!

ರೈಲು ಪ್ರಯಾಣದ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವುದಕ್ಕೆ ನಿಷೇಧವಿದ್ದು ಸಿಕ್ಕಿಬಿದ್ದವರಿಗೆ ದಂಡದ ಜೊತೆಗೆ ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಷ್ಟಾದರೂ ಕೂಡ ಕೆಲವರು ಈ ನಿಯಮವನ್ನು ಉಲ್ಲಂಘಿಸುವ ಮೂಲಕ ಸ್ವತಃ ಸಂಕಷ್ಟಕ್ಕೆ ಸಿಲುಕುವುದರ ಜೊತೆಗೆ ಸಹ ಪ್ರಯಾಣಿಕರಿಗೂ ಅಪಾಯಕಾರಿಯಾಗಿ ಪರಿಣಮಿಸುತ್ತಾರೆ.

ಇದೀಗ ಇಂಥವುದೇ ಒಂದು ಘಟನೆ ಟಾಟಾ ನಗರ್ – ಕಥಿಹಾರ್ ನಡುವೆ ಸಂಚರಿಸುವ ರೈಲಿನಲ್ಲಿ ನಡೆದಿದ್ದು, ಪಶ್ಚಿಮ ಬಂಗಾಳದ ಅಸಿನ್ಸಾಲ್ ನಲ್ಲಿ ರೈಲು ಏರಿದ ಯುವತಿ ರಾತ್ರಿ ಪೂರ ಗಾಂಜಾ ಸೇವಿಸುವುದರ ಜೊತೆಗೆ ಧೂಮಪಾನವನ್ನೂ ಮಾಡಿದ್ದಾಳೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹ ಪ್ರಯಾಣಿಕರೊಬ್ಬರು ಇದರ ವಿಡಿಯೋ ತೆಗೆದು ಟ್ವಿಟರ್ ನಲ್ಲಿ ರೈಲ್ವೆ ಇಲಾಖೆಗೆ ಟ್ಯಾಗ್ ಮಾಡಿದ್ದು, ಈ ಯುವತಿ ಗಾಂಜಾ ಹಾಗೂ ಧೂಮಪಾನ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೂ ಟ್ಯಾಗ್ ಮಾಡಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಇಂತಹ ಪ್ರಯಾಣಿಕರನ್ನು ಒಂದು ವರ್ಷದ ಕಾಲ ರೈಲಿನಲ್ಲಿ ಪ್ರಯಾಣ ಮಾಡುವುದಕ್ಕೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular