ಸಾರ್ಜನಿಕರೇ ಗಮನಿಸಿ : ಸಿಎಂ `ಜನತಾ ದರ್ಶನ’ ಮುಂದೂಡಿಕೆ

ಬೆಂಗಳೂರು : ಇದೇ ಅಕ್ಟೋಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಅಕ್ಟೋಬರ್ 09 ರಂದು ನಾನು ದೆಹಲಿ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಆ ದಿನ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದೂರದ ಊರುಗಳಿಂದ ನನ್ನನ್ನು ಭೇಟಿ ಮಾಡಲು ಬರಬೇಕೆಂದಿದ್ದವರು ದಯವಿಟ್ಟು ಇದನ್ನು ಗಮನಿಸಿ ಎಂದಿದ್ದಾರೆ.

ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read