HomeKarnatakaಸಾರ್ವಜನಿಕರೇ ಗಮನಿಸಿ : 'ಕೊರೊನಾ' ತಡೆಗಟ್ಟಲು ತಪ್ಪದೇ ಈ ಸೂತ್ರಗಳನ್ನು ಪಾಲಿಸಿ

ಸಾರ್ವಜನಿಕರೇ ಗಮನಿಸಿ : ‘ಕೊರೊನಾ’ ತಡೆಗಟ್ಟಲು ತಪ್ಪದೇ ಈ ಸೂತ್ರಗಳನ್ನು ಪಾಲಿಸಿ

ಬೆಂಗಳೂರು : ಕೇರಳದಲ್ಲಿ ಕೊರೊನಾ ಹೊಸ ರೂಪಾಂತರಿ ಪತ್ತೆ ಹಾಗೂ ದೇಶಾದ್ಯಂತ ಹೊಸ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಮಾಸ್ಕ್‌ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಆರೋಗ್ಯ ಇಲಾಖೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊರೊನಾ ತಡೆಗಟ್ಟಲು ಈ ಕ್ರಮಗಳನ್ನು ಅನುಸರಿಸಿ

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರು ಮನೆಯಿಂದ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ

ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ

ವೈಯಕ್ತಿಕ ಸ್ವಚ್ಛತೆಯ ಕಡೆಗೆ ಹೆಚ್ಚು ಗಮನ ನೀಡಿ

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಜನಸಂದಣಿ ಪ್ರದೇಶದಿಂದ ದೂರವಿರಿ

ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ

For Latest News Updates, Join Our Whatsapp Community🚩
RELATED ARTICLES

Most Popular