HomeLatest Newsಗಮನಿಸಿ...! ರಾಜ್ಯದಲ್ಲಿ ಜೂ. 11 ರಿಂದ ಭಾರೀ ಮಳೆ ಸಾಧ್ಯತೆ: 'ಯೆಲ್ಲೋ ಅಲರ್ಟ್'

ಗಮನಿಸಿ…! ರಾಜ್ಯದಲ್ಲಿ ಜೂ. 11 ರಿಂದ ಭಾರೀ ಮಳೆ ಸಾಧ್ಯತೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ದು ಜೂನ್ 11ರಿಂದ ಮತ್ತೆ ಚುರುಕಾಗಲಿದೆ. ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಗದಿತ ಅವಧಿಗಿಂತ ಮೊದಲೇ ರಾಜ್ಯಕ್ಕೆ ಕಾಲಿಟ್ಟು ಆರಂಭದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದ್ದ ಮುಂಗಾರು ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.

ರಾಜ್ಯದಲ್ಲಿ ಸೋಮವಾರದಿಂದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆಯಿದ್ದು, ಜೂನ್ 11ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು  ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular