ನವದೆಹಲಿ : 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಕಾಶ್ಮೀರಿ ಮಹಿಳೆಯ ಜೊತೆ ಪ್ರಧಾನಿ ಮೋದಿ ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಕಾರ್ಯಕ್ರಮದ ನೇತೃತ್ವ ವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಟ್ವಿಟರ್ ನಲ್ಲಿ ಮೋದಿ ಸ್ಥಳೀಯ ಮಹಿಳೆಯರೊಂದಿಗೆ ಸೆಲ್ಫಿ ಕ್ಲಿಕ್ಕಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ .ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಯೋಗ ಪ್ರದರ್ಶನ ನೀಡಿದರು. ಜಗತ್ತು ಯೋಗವನ್ನು ಜಾಗತಿಕ ಒಳಿತಿನ ಪ್ರಬಲ ಏಜೆಂಟ್ ಆಗಿ ನೋಡುತ್ತಿದೆ. ಗತಕಾಲದ ಹೊರೆಯಿಲ್ಲದೆ ಪ್ರಸ್ತುತ ಕ್ಷಣದಲ್ಲಿ ಬದುಕಲು ಯೋಗ ನಮಗೆ ಸಹಾಯ ಮಾಡುತ್ತದೆ” ಎಂದು ಪ್ರಧಾನಿ ಹೇಳಿದರು.
Post Yoga selfies in Srinagar! Unparalled vibrancy here, at the Dal Lake. pic.twitter.com/G9yxoLUkpX
— Narendra Modi (@narendramodi) June 21, 2024