ಬ್ರೇಕ್ ಅಪ್ ರೂಮರ್ ಮಧ್ಯೆ ಮಾಡೆಲ್ ಜೊತೆ ಕಾಣಿಸಿಕೊಂಡ ಸುಶ್ಮಿತಾ ಸೇನ್…!

ಮಿಸ್ ಯೂನಿವರ್ಸ್, ಬಾಲಿವುಡ್ ನಟಿ ಸುಶ್ಮಿತಾ ಸೇನ್ ತಮ್ಮ ಬಣ್ಣದ ಬದುಕಿನ ಜೊತೆಗೆ ವೈಯಕ್ತಿಕ ಜೀವನ ಕಾರಣಗಳಿಂದಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಸದ್ಯ ಅವರು ತಾಲಿ ಮತ್ತು ಆರ್ಯ ಸೀಸನ್ 3 ಸೀರಿಸ್ ನಲ್ಲಿ ಪ್ರಶಂಸೆ ಪಡೆಯುತ್ತಿದ್ದಾರೆ. ಈ ನಡುವೆ ಅವರು ಮಾಡೆಲ್ ರೋಹ್ಮನ್ ಶಾಲ್ ಅವರೊಂದಿಗೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

ಹಲವರೊಂದಿಗೆ ಡೇಟಿಂಗ್ ನಡೆಸಿದ್ದ ಸುಶ್ಮಿತಾ ಸೇನ್ ಮಾಡೆಲ್ ರೋಹ್ಮನ್ ಶಾಲ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದರು. ಆದರೆ ಇತ್ತೀಚಿಗೆ ಅವರಿಬ್ಬರು ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಮಂಗಳವಾರ ಸುಶ್ಮಿತಾ ಸೇನ್ , ರೋಹ್ಮನ್ ಶಾಲ್ ಅವರೊಂದಿಗೆ ನಗುತ್ತಾ ಒಟ್ಟಿಗೆ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿದೆ. ಕ್ಲಿನಿಕ್ ಬ್ಯಾಂಡ್‌ಸ್ಟ್ಯಾಂಡ್ ಬಾಂದ್ರಾದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಇದಕ್ಕೂ ಮುನ್ನ ಜನವರಿ 4 ರಂದು ಸುಶ್ಮಿತಾ ಸೇನ್ ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್‌ಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಇಬ್ಬರೂ ಒಟ್ಟಿಗೆ ಇರುವ ಫೋಟೋ ಹಂಚಿಕೊಂಡು ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದರು.

ಸುಶ್ಮಿತಾ ಸೇನ್ ಇತ್ತೀಚೆಗೆ ತಾಲಿ ಎಂಬ ವೆಬ್ ಸರಣಿಯಲ್ಲಿ ಕಾಣಿಸಿಕೊಂಡರು. ಗೌರಿ ಸಾವಂತ್ ಎಂಬ ಲೈಂಗಿಕ ಅಲ್ಪಸಂಖ್ಯಾತೆಯ ಪಾತ್ರವನ್ನು ನಿರ್ವಹಿಸಿದ್ದಾರೆ. ಇದರಲ್ಲಿ ಸುಶ್ಮಿತಾ ಸೇನ್ ಅವರ ನಟನೆಯು ಸಕಾರಾತ್ಮಕ ವಿಮರ್ಶೆಗಳನ್ನು ಸ್ವೀಕರಿಸಿದೆ.

ಇದಲ್ಲದೆ ಅವರು ರಾಮ್ ಮಾಧ್ವನಿಯ ಕ್ರೈಮ್ ಥ್ರಿಲ್ಲರ್ ವೆಬ್ ಸರಣಿ ‘ಆರ್ಯ’ದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read