ಬೆಂಗಳೂರು: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಿನ್ನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ. ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಕುಡಿದು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಗೇಟ್ ನಿಂದ ತಡೆದ ಸೆಕ್ಯೂರಿಟಿ ಗಾರ್ಡ್ ನನ್ನು ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಂದಿದ್ದಾರೆ ಎನ್ನಲಾಗಿದೆ.
CCTV footage showing the murder at #Bengaluru's Sindhi college unfold
College teachers claim the accused student Bhargab Jyothi Barman was among the toppers in class…he hails from #Assam & lives at a nearby PG
Barman was a participant at the cultural fest that was underway… pic.twitter.com/GZ3aKV6bx4
— Nabila Jamal (@nabilajamal_) July 4, 2024
https://twitter.com/i/status/1808528195613777967

