ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ತಮಿಳುನಾಡು ಮುಖ್ಯಸ್ಥ ಕೆ.ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್ ಕೌಂಟರ್ ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆಯಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ತಿರುವೆಂಗಡಮ್ ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದರ ನಡುವೆ ಆರ್ಮ್ ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಸಿಸಿಟಿವಿಯ ದೃಶ್ಯಾವಳಿಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಆರ್ಮ್ ಸ್ಟ್ರಾಂಗ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
Chennai City police released the CCTV footage of #ArmstrongBSP,
after a prime suspect Thiruvenkadam
who was involved in the murder was shot dead in a police encounter.Earlier, the local residents claimed that the CCTV adjacent to the murder spot was malfunction pic.twitter.com/Ib0kUXItMj
— Vinodh Arulappan (@VinodhArulappan) July 14, 2024

