ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿರುವ ರಾಷ್ಟ್ರೀಯ ತಾಂತ್ರಿಕ ವಿದ್ಯಾಲಯ (ಎನ್‌ಐಟಿ) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸುದ್ದಿಯಾಗಿದೆ.
ಹಾಸ್ಟೆಲ್‌ಗೆ ಪ್ರವೇಶಿಸುವ ಸಮಯದ ಕುರಿತು ಭುಗಿಲೆದ್ದ ವಾದ-ವಿವಾದಗಳು ಹೀಗೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ದೊಣ್ಣೆ ಹಾಗೂ ಕಲ್ಲುಗಳನ್ನು ಹಿಡಿಕೊಂಡು ಒಬ್ಬರ ವಿರುದ್ಧ ಒಬ್ಬರು ವಿದ್ಯಾರ್ಥಿಗಳು ನಿಂತಿರುವ ಈ ವಿಡಿಯೋ ವೈರಲ್ ಆಗಿದೆ.
“ಇದೊಂದು ಸಣ್ಣ ಘಟನೆಯಾಗಿದ್ದು, ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ, ಮೊದಲ ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳ ನಡುವಿನ ಈ ಗಲಾಟೆಯಲ್ಲಿ ಯಾವುದೇ ವಿದ್ಯಾರ್ಥಿಗೆ ಗಾಯಗಳಾಗಿಲ್ಲ,” ಎಂದು ಹಾಸ್ಟೆಲ್ ವಾರ್ಡನ್ ತಿಳಿಸಿದ್ದಾರೆ.
ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
https://twitter.com/AbhinavRanta/status/1639823962782973953?ref_src=twsrc%5Etfw%7Ctwcamp%5Etweetembed%7Ctwterm%5E1639823962782973953%7Ctwgr%5E98e269bf6b2174a65fdf0e271a7a53a476af1f10%7Ctwcon%5Es1_&ref_url=https%3A%2F%2Fwww.freepressjournal.in%2Feducation%2Fwatch-viral-video-clash-amongst-students-at-nit-hamirpur-campus