‌Watch: ಔಟಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಕೊಹ್ಲಿ ; ವಿಡಿಯೋ ವೈರಲ್

ನಿನ್ನೆ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 42 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 67 ರನ್ ಗಳಿಸಿ ಮಿಂಚಿದರು. ಆದರೆ, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಎಸೆತಕ್ಕೆ ಟಾಪ್ ಎಡ್ಜ್ ಆಗಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ ಕ್ಯಾಚ್ ನೀಡಿ ವಿಕೆಟ್ ಕಳೆದುಕೊಂಡರು.

ವಿಕೆಟ್ ಕಳೆದುಕೊಂಡ ನಂತರ ಕೊಹ್ಲಿ ತಮ್ಮ ಬೇಸರವನ್ನು ನಿಯಂತ್ರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಡ್ರೆಸ್ಸಿಂಗ್ ರೂಮ್‌ಗೆ ಹಿಂತಿರುಗುವಾಗ ತಮ್ಮ ಬ್ಯಾಟ್ ಅನ್ನು ನೆಲಕ್ಕೆ ಬಡಿದು, ಕೈಗವಸುಗಳನ್ನು ಎಸೆದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಐಪಿಎಲ್ ಋತುವಿನಲ್ಲಿ ಇದು ಅವರ ಎರಡನೇ ಅರ್ಧಶತಕವಾಗಿದ್ದು, ಟಿ20 ಕ್ರಿಕೆಟ್‌ನಲ್ಲಿ 13,000 ರನ್ ಗಳಿಸಿದ ವಿಶ್ವದ ಐದನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಸಾಧನೆಯನ್ನು ಅವರು ತಮ್ಮ ವೃತ್ತಿ ಜೀವನದ 400 ಕ್ಕೂ ಹೆಚ್ಚು ಪಂದ್ಯಗಳಲ್ಲಿ ಮಾಡಿದರು. ಕಳೆದ ವರ್ಷ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಎರಡನೇ ಬಾರಿಗೆ ಚಾಂಪಿಯನ್ ಆಗಲು ನೆರವಾದ ನಂತರ ಕೊಹ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಅವರು 125 ಪಂದ್ಯಗಳಲ್ಲಿ 48.69 ಸರಾಸರಿ ಮತ್ತು 137.04 ಸ್ಟ್ರೈಕ್ ರೇಟ್‌ನಲ್ಲಿ ಒಂದು ಶತಕ ಮತ್ತು 38 ಅರ್ಧಶತಕಗಳೊಂದಿಗೆ 4,188 ರನ್ ಗಳಿಸಿದ್ದಾರೆ.

ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ (4,231 ರನ್) ಮತ್ತು ಪಾಕಿಸ್ತಾನದ ಬಾಬರ್ ಅಜಮ್ (4,223 ರನ್) ನಂತರ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ 451 ಪಂದ್ಯಗಳಲ್ಲಿ 11,851 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಸೋಮವಾರದ ಐಪಿಎಲ್ ಪಂದ್ಯದ ಮೊದಲು ಕೊಹ್ಲಿ ಒಟ್ಟಾರೆ 12,983 ರನ್ ಗಳಿಸಿದ್ದರು. ಇದರಲ್ಲಿ 9 ಶತಕ ಮತ್ತು 98 ಅರ್ಧಶತಕಗಳು ಸೇರಿವೆ. ಅವರ ಸರಾಸರಿ 38.93 ಮತ್ತು ಸ್ಟ್ರೈಕ್ ರೇಟ್ 132 ಕ್ಕಿಂತ ಹೆಚ್ಚಿದೆ.

ಮಾರ್ಚ್ 23 ರಂದು ಆರ್‌ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಋತುವಿನ ಆರಂಭಿಕ ಪಂದ್ಯವು ಕೊಹ್ಲಿಯವರ 400 ನೇ ಟಿ20 ಪಂದ್ಯವಾಗಿತ್ತು.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕ್ರಿಸ್ ಗೇಲ್ 463 ಪಂದ್ಯಗಳಲ್ಲಿ 14,562 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ನಂತರದ ಸ್ಥಾನಗಳಲ್ಲಿ ಅಲೆಕ್ಸ್ ಹೇಲ್ಸ್ (13,610 ರನ್), ಶೋಯೆಬ್ ಮಲಿಕ್ (13,557 ರನ್) ಮತ್ತು ಕೀರನ್ ಪೊಲಾರ್ಡ್ (13,537 ರನ್) ಇದ್ದಾರೆ.

ವಿಶೇಷವಾಗಿ ಹೇಳುವುದಾದರೆ, ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು 8000 ರನ್ ಗಳಿಸಿದ ಏಕೈಕ ಬ್ಯಾಟರ್ ಆಗಿದ್ದಾರೆ. 256 ಐಪಿಎಲ್ ಪಂದ್ಯಗಳಲ್ಲಿ ಕೊಹ್ಲಿ 8 ಶತಕಗಳನ್ನು ಗಳಿಸಿದ್ದಾರೆ, ಇದು ಯಾವುದೇ ಬ್ಯಾಟರ್ ಗಳಿಸಿದ ಗರಿಷ್ಠ ಶತಕಗಳಾಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read