ಶಿವಸೇನಾ ನಾಯಕ ರಾಹುಲ್​ ಕನಾಲ್​​ ನಿವಾಸಕ್ಕೆ ಭೇಟಿ ನೀಡಿದ ವಿರಾಟ್​ ಕೊಹ್ಲಿ…!

ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್​ ಕೊಹ್ಲಿ ಮುಂಬೈನಲ್ಲಿ ಶಿವಸೇನಾ ನಾಯಕ ರಾಹುಲ್​ ಕನಾಲ್​ರ ನಿವಾಸಕ್ಕೆ ಭೇಟಿ ನೀಡಿದ್ದು ಗಣೇಶ ಮೂರ್ತಿಯ ದರ್ಶನ ಪಡೆದಿದ್ದಾರೆ. ಕಪ್ಪು ಬಣ್ಣದ ಕುರ್ತಾ ಧರಿಸಿದ್ದ ಕೊಹ್ಲಿ, ಕರ್ನಾಲ್​ ನಿವಾಸದಿಂದ ಹೊರಬರುತ್ತಿರೋದು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಂಗಳವಾರ ಮುಂಜಾನೆ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್​ ಕೊಹ್ಲಿ ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬಕ್ಕೆ ಶುಭಕೋರಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಈ ಸೆಲೆಬ್ರಿಟಿ ದಂಪತಿ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. ಈ ಫೋಟೋದಲ್ಲಿ ಪರಿಸರ ಸ್ನೇಹಿ ಗಣಪನೊಂದಿಗೆ ಸಾಂಪ್ರದಾಯಿಕ ಸೀರೆಯಲ್ಲಿ ಅನುಷ್ಕಾ ಅತ್ಯಂತ ಸೊಗಸಾಗಿ ಕಂಗೊಳಿಸಿದ್ದಾರೆ. ವಿರುಷ್ಕಾ ದಂಪತಿಯ ಈ ಫೊಟೋ ಸಖತ್​ ವೈರಲ್​ ಕೂಡ ಆಗಿದೆ.

 

https://twitter.com/CricCrazyJohns/status/1704414846203433312

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read