HomeEntertainmentಸಿನಿಮಾ ಡೈಲಾಗ್ ಈಗ ರಿಯಲ್ ಲೈಫ್‌ನಲ್ಲಿ ಸತ್ಯ: ತಮಿಳುನಾಡು ಮುಖ್ಯಮಂತ್ರಿಯಾಗಲು ಸಜ್ಜಾದ ದಳಪತಿ ವಿಜಯ್!

ಸಿನಿಮಾ ಡೈಲಾಗ್ ಈಗ ರಿಯಲ್ ಲೈಫ್‌ನಲ್ಲಿ ಸತ್ಯ: ತಮಿಳುನಾಡು ಮುಖ್ಯಮಂತ್ರಿಯಾಗಲು ಸಜ್ಜಾದ ದಳಪತಿ ವಿಜಯ್!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿದೆ. ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ವಿಜಯ್ ಅವರ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿರುವ ಈ ಸಂದರ್ಭದಲ್ಲಿ, 2018ರ ಅವರ ಹಳೆಯ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಸುಮಾರು ಎಂಟು ವರ್ಷಗಳ ಹಿಂದೆ ವಿಜಯ್ ಅಭಿನಯದ ‘ಸರ್ಕಾರ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ನೀಡಿದ್ದ ಹೇಳಿಕೆ ಈಗ ನಿಜವಾಗಿದೆ. ಅಂದು ಕಾರ್ಯಕ್ರಮದ ವೇದಿಕೆ ಮೇಲೆ ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಹೇಗಿರುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ್ದ ವಿಜಯ್, “ನಾನು ಒಂದು ವೇಳೆ ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ, ಮುಖ್ಯಮಂತ್ರಿಯಂತೆ ನಟಿಸುವುದಿಲ್ಲ. ಬದಲಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದರು. ಅಂದು ಅವರು ಆಡಿದ್ದ ಈ ಮಾತುಗಳನ್ನು ಅಭಿಮಾನಿಗಳು ಈಗ ಹಂಚಿಕೊಳ್ಳುತ್ತಿದ್ದು, ದಳಪತಿ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಗದ್ದುಗೆ ಏರುತ್ತಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ.

ಚುನಾವಣಾ ಗೆಲುವಿನ ನಂತರ ವಿಜಯ್ ಯಾವುದೇ ದೊಡ್ಡ ಆಚರಣೆಗಳಿಗೆ ಮೊರೆ ಹೋಗದೆ, ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ತಮ್ಮ ರಾಜಕೀಯ ಸಿದ್ಧಾಂತವನ್ನು ಸ್ಪಷ್ಟಪಡಿಸಿದ್ದಾರೆ. ತಾವು ಕೇವಲ ಒಬ್ಬ ಚಿತ್ರನಟನಲ್ಲ, ಬದಲಾಗಿ ದ್ರಾವಿಡ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುವ ನಾಯಕ ಎಂದು ಅವರು ತೋರಿಸಿಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ವಿಜಯ್ ಅವರ ಈ ದೊಡ್ಡ ಗೆಲುವಿಗೆ ಚಿತ್ರರಂಗದ ಗಣ್ಯರಾದ ರಜನಿಕಾಂತ್, ನಾನಿ ಸೇರಿದಂತೆ ಹಲವರು ಶುಭ ಕೋರಿದ್ದಾರೆ. ವಿಶೇಷವೆಂದರೆ, ವಿಜಯ್ ಅವರ ಆಪ್ತ ಗೆಳತಿ ಹಾಗೂ ನಟಿ ತ್ರಿಶಾ ಕೃಷ್ಣನ್ ಅವರು ವಿಜಯ್ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ತಿಳಿಸಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಜಯ್ ಅವರು ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಸ್ಥಿರ ಸರ್ಕಾರ ರಚಿಸುವತ್ತ ಗಮನ ಹರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular