HomeLatest Newsಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ ನೀರು : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಭದ್ರಾ ಜಲಾಶಯದಿಂದ ತುಂಗಾ-ಭದ್ರಾ ನದಿಗೆ ನೀರು : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಶಿವಮೊಗ್ಗ :   2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular