ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ಮುಂಜಾಗ್ರತೆ ವಹಿಸುವಂತೆ ನದಿ ಸುತ್ತಲಿನ ಜನರಿಗೆ ಸೂಚನೆ

 

ಕೊಪ್ಪಳ : ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೀರಾವರಿ ನಿಗಮ ನಿಯಮಿತದಿಂದ ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ ಕೆಳಭಾಗದಲ್ಲಿ ಮಳೆಯ ಕೊರತೆಯಿಂದಾಗಿ ತುಂಗಭದ್ರಾ ನದಿ ಅವಲಂಭಿತ ಜನ/ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಯ ಮೂಲಕ ನದಿಗೆ ಸುಮಾರು 0.5 ಟಿ.ಎಂ.ಸಿಯಷ್ಟು ನೀರನ್ನು ಜನ-ಜಾನುವಾರುಗಳ ಕುಡಿಯುವ ಸಲುವಾಗಿ ಹರಿಬಿಡಲು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸೂಚಿಸಿದ್ದು, ಆಗಸ್ಟ್ 10ರಿಂದ 0.50 ಟಿ.ಎಂ.ಸಿಯಷ್ಟು ನೀರನ್ನು ನದಿಗೆ ಬಿಡಲಾಗುವುದು.

ಆದ್ದರಿಂದ ತುಂಗಭದ್ರಾ ಜಲಾಶಯದ ಕೆಳಭಾಗದ ಗ್ರಾಮಸ್ಥರು ಯಾವುದೇ ಜನ ಮತ್ತು ಜಾನುವಾರುಗಳನ್ನು ನದಿಯ ಹತ್ತಿರ ಓಡಾಡದಂತೆ ಮುಂಜಾಗ್ರತೆ ವಹಿಸುವಂತೆ ಪ್ರಕಟಣೆ ತಿಳಿಸಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read