ರಾಜ್ಯಕ್ಕೆ ಕೇಂದ್ರದಿಂದ ಶಾಕ್: ಭದ್ರಾ ರಾಷ್ಟ್ರೀಯ ಯೋಜನೆ ಕೈಬಿಟ್ಟ ಕೇಂದ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ರಾಷ್ಟ್ರೀಯ ಯೋಜನೆ ಮಾಡುವುದಿಲ್ಲ ಎಂದು ಹೇಳುತ್ತಿರುವುದಾಗಿ ಜಲ ಸಂಪನ್ಮೂಲ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪರೋಕ್ಷವಾಗಿ ತನ್ನ ಭರವಸೆ ಬಗ್ಗೆ ಯೂಟರ್ನ್ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಬಜೆಟ್ ನಲ್ಲಿ ಘೋಷಿಸಿದ 5000 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಇನ್ನೂ ಕೊಟ್ಟಿಲ್ಲ. ನನ್ನ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಮಾತ್ರ ಇದ್ದು 25,000 ಕೋಟಿ ಬಿಲ್ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ ಕೇಂದ್ರದಿಂದ ಅನುದಾನ ನೀಡಲು ಒಪ್ಪಿದೆ ಎಂದು ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗ ಕೇಂದ್ರ ಹಣಕಾಸು ಸಚಿವರು ಮಂಡಿಸಿದ ಬಜೆಟ್ ನಲ್ಲಿ ಯೋಜನೆಗೆ 5300 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರು. ಅದಕ್ಕಿಂತ ಮೊದಲು ಜಲ ಸಂಪನ್ಮೂಲ ಸಚಿವರಾಗಿದ್ದ ಗೋವಿಂದ ಕಾರಜೋಳ ಅವರು 21,450 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ 16000 ಕೋಟಿ ರೂ. ನೀಡಲಿದೆ ಎಂದು ತಿಳಿಸಿದ್ದರು. ಆದರೆ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿಲ್ಲ. 5000 ಕೋಟಿ ರೂಗಳನ್ನು ನೀಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read