ನೀರಿನ ಅಭಾವ ಹಿನ್ನೆಲೆ ಬೆಂಗಳೂರಿನ ಐಪಿಎಲ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಅಭಾವ ಕಾರಣ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ನೀರಿನ ಅಭಾವ ಐಪಿಎಲ್ ಪಂದ್ಯಗಳ ಮೇಲೆಯೂ ಪರಿಣಾಮ ಬೀರುವ ಸಂಭವ ಇರುವುದರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಪಂದ್ಯಗಳನ್ನು ಸ್ಥಳಾಂತರ ಮಾಡಬಹುದು ಎಂದು ಹೇಳಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಮೂರು ಪಂದ್ಯಗಳು ನಿಗದಿಯಾಗಿದ್ದು, ಈ ಪಂದ್ಯಗಳ ಸ್ಥಳಾಂತರಕ್ಕೆ ಚಿಂತನೆ ನಡೆದಿದೆ ಕೆ.ಎಸ್.ಸಿ.ಎ. ಆಡಳಿತ ಮಂಡಳಿ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಪಂದ್ಯ ನಡೆಸಲು ಸುಮಾರು 60 ರಿಂದ 70 ಸಾವಿರ ಲೀಟರ್ ನೀರು ಬೇಕಾಗುತ್ತದೆ. ಪ್ರತಿನಿತ್ಯ ನಿರ್ವಹಣೆಗೂ ಸಾವಿರಾರು ಲೀಟರ್ ನೀರು ಬೇಕಿದೆ. ಬೆಂಗಳೂರಿನಲ್ಲಿ ನೀರಿನ ಅಭಾವ ತೀವ್ರವಾಗಿದ್ದು ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹೆಚ್ಚು ನೀರು ಬಳಸುವ ಐಪಿಎಲ್ ಪಂದ್ಯಗಳನ್ನು ನಡೆಸುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂದ ಹಿನ್ನೆಲೆಯಲ್ಲಿ ಪಂದ್ಯ ಸ್ಥಳಾಂತರದ ಚಿಂತನೆ ನಡೆದಿದೆ.

ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜಲ ಮಂಡಳಿ ನೀರಿನ ಮೇಲೆ ಹೆಚ್ಚು ಅವಲಂಬಿತವಾಗಿಲ್ಲ. ಕೊಳಚೆ ನೀರು ಶುದ್ಧೀಕರಣ ಮಾಡಿ ಬಳಕೆ ಮಾಡಲಾಗುತ್ತಿದೆ. ಪಂದ್ಯಗಳ ಆಯೋಜನೆಗೆ ಸಮಸ್ಯೆ ಆಗದು. ಈ ನಿಟ್ಟಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read