HomeLatest Newsಅನ್ನದಾತ ರೈತರಿಗೆ ಗುಡ್ ನ್ಯೂಸ್: ಬೇಡಿಕೆಯಂತೆ ಬೇಸಿಗೆ ಬೆಳೆಗೆ ನೀರು

ಅನ್ನದಾತ ರೈತರಿಗೆ ಗುಡ್ ನ್ಯೂಸ್: ಬೇಡಿಕೆಯಂತೆ ಬೇಸಿಗೆ ಬೆಳೆಗೆ ನೀರು

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗದಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರ್. ರವಿಚಂದ್ರ, ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕವೀ ನಿ ನಿ ಭದ್ರಾ ಯೋಜನಾ ವೃತ್ತ, ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular