HomeKarnatakaBREAKING: ವಾಟರ್ ಟ್ಯಾಂಕರ್ ಡಿಕ್ಕಿ; ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ದುರ್ಮರಣ

BREAKING: ವಾಟರ್ ಟ್ಯಾಂಕರ್ ಡಿಕ್ಕಿ; ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್, ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿ ನಡೆದಿದೆ.

ಬೆಳ್ಳಂದೂರು ಬಸ್ ನಿಲ್ದಾಣದ ಬಳಿ ಈ ದುರಂತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ ಮುರುಗನ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಟರ್ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular