ವಯನಾಡು ಭೂಕುಸಿತ ದುರಂತದಲ್ಲಿ ಮೃತರ ಸಂಖ್ಯೆ 357 ಕ್ಕೆ ಏರಿಕೆ, 206 ಜನ ನಾಪತ್ತೆ

ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 357 ಕ್ಕೆ ಏರಿಕೆಯಾಗಿದೆ. ಮಣ್ಣಿನ ಪ್ರವಾಹದಲ್ಲಿ ಕೊಚ್ಚಿ ಹೋದವರು, ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಗುಡ್ಡ ಕುಸಿತ ಪ್ರದೇಶದಲ್ಲಿ ನಾಲ್ಕು ದಿನಗಳಿಂದ ಅನ್ನ, ನೀರು ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದ ನಾಲ್ವರು ಮಕ್ಕಳನ್ನು ಶನಿವಾರ ರಕ್ಷಿಸಲಾಗಿದೆ. ಮಣ್ಣು ಮಿಶ್ರಿತ ನೀರಿನಲ್ಲಿ ಕೊಚ್ಚಿ ಹೋದ ಜನರ ಪತ್ತೆಗೆ ರೆಡಾರ್, ಸ್ನೈಪರ್ ಡಾಗ್ ಗಳನ್ನು ಬಳಸಿಕೊಂಡು ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಬಂಡೆಗಳು ಬಡಿದು ಕುಸಿದು ಬಿದ್ದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರ ಪತ್ತೆಗೂ ಕಾರ್ಯಾಚರಣೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ 206 ಜನ ನಾಪತ್ತೆಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read