HomeIndiaBREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಮೊದಲ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

BREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಮೊದಲ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

ವಯನಾಡ್ ಲೋಕಸಭಾ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಯನಾಡ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಮತಗಳಿಗಿಂತಲೂ ಹೆಚ್ಚು ಮತಗಳನ್ನು ಸಹೋದರಿ ಪ್ರಿಯಾಂಕಾ ಗಾಂಧಿ ಪಡೆದಿದ್ದಾರೆ ಎನ್ನಲಾಗಿದೆ.

ಸದ್ಯ ಪ್ರಿಯಾಂಕಾ ಗಾಂಧಿ 6, 17, 942 ಮತಗಳನ್ನು ಪಡೆದಿದ್ದು, ಅಂತಿಮ ಸುತ್ತಿನ ಮತ ಎಣಿಕೆ ಮುಂದುವರೆದಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಸತ್ಯನ್ ಮೊಕೇರಿ 2,02261ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ 1,06,724 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಕೇರಳದ ವಯನಾಡ್ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ಬಳಿಕ ವಯನಾಡ್ ಕ್ಷೇತ್ರ ತೊರೆದು ರಾಯ್ ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ವಯನಾಡ್ ಕ್ಷೇತ್ರಕ್ಕೆ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಅಣ್ಣನ ಕ್ಷೇತ್ರ ಉಳಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular