HomeKarnatakaʻನಾವೂ ರಾಮಭಕ್ತರೇ……ʼ ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ: ಸಿಎಂ ಸಿದ್ದರಾಮಯ್ಯ

ʻನಾವೂ ರಾಮಭಕ್ತರೇ……ʼ ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ರಾಮಭಕ್ತರೇ, ರಾಮನನ್ನು ಆರಾಧಿಸುವವರೆ, ರಾಮನ ಭಜನೆ ಮಾಡುವವರೆ, ರಾಮನ ದೇವಾಲಯ ಕಟ್ಟಿದ್ದೇವೆ. ಬಿಜೆಪಿಯವರಂತೆ ರಾಮನ ಹೆಸರಲ್ಲಿ ರಾಜಕಾರಣ ಮಾಡುವವರಲ್ಲ. ರಾಮಮಂದಿರಕ್ಕೆ ನಮ್ಮ ವಿರೋಧವಲ್ಲ, ಮಂದಿರದ ಹೆಸರಲ್ಲಿ ಬಿಜೆಪಿ ಮಾಡುತ್ತಿರುವ ರಾಜಕಾರಣಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular