ಬೆಂಗಳೂರು : ನಿಮ್ಮ ಜೊತೆ ಸದಾ ನಾವಿದ್ದೇವೆ ಎಂದು ನಟಿ ರಮ್ಯಾ ಪರ ನಟ ಶಿವರಾಜ್ ಕುಮಾರ್ ಧ್ವನಿ ಎತ್ತಿದ್ದಾರೆ. ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಅಶ್ಲೀಲ ಮೆಸೇಜ್ ವಿಚಾರಕ್ಕೆ ನಟ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.
”ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.
ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು.ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ನಟ ಶಿವರಾಜ್ ಕುಮಾರ್ ಪೋಸ್ಟ್ ಮಾಡಿದ್ದಾರೆ.

You Might Also Like
TAGGED:ನಟ ಶಿವರಾಜ್ ಕುಮಾರ್