ಬೆಂಗಳೂರು : ನಾವು ಕದ್ದುಮುಚ್ಚಿ ಅಡ್ಜಸ್ಟ್ ಮೆಂಟ್ ಮಾಡಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ನಡೆಸುವ ಕಷ್ಟ ನಮಗೂ ಗೊತ್ತಿದೆ. ಅಡ್ಜಸ್ಟ್ಮೆಂಟ್ ಮಾಡ್ಕೋಬೇಕಾದರೆ ಓಪನ್ ಆಗಿಯೇ ಮಾಡಿದ್ದೇವೆ. ಆದರೆ ಕದ್ದುಮುಚ್ಚಿ ಅಡ್ಜಸ್ಟ್ಮೆಂಟ್ ಮಾಡಿಕೊಂಡಿಲ್ಲ ಎಂದು ಟಾಂಗ್ ನೀಡಿದ್ದಾರೆ.
ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಬಿಜೆಪಿ ನಾಯಕರು ಕಿತ್ತಾಡ್ತಾ ಇದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಬಗ್ಗೆ ಮಾತನಾಡಿದ ಜಿ.ಟಿ. ದೇವೇಗೌಡ, ರಾಜ್ಯ ಬಿಜೆಪಿ ನಾಯಕರು ಕಚ್ಚಾಡುತ್ತಿದ್ದಾರೆ. ನೋಡ್ತಾ ಇರಿ. ಕುಮಾರಸ್ವಾಮಿಯವರೇ ವಿರೋಧ ಪಕ್ಷದ ನಾಯಕನಾಗ್ತಾರೆ. ಕುಮಾರಸ್ವಾಮಿಯವರೇ, ವಿಪಕ್ಷ ನಾಯಕನ ಸ್ಥಾನ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಿದರು.ಇದೇ ವೇಳೆ ಮಾಜಿ ಸಿಎಂ ಬಿ ಎಸ್ ವೈ ಅವರನ್ನು ಸಿಎಂ ಸ್ಥಾನದಿಂದ ಯಾಕೆ ಕೆಳಗಿಳಿಸಿದರು ಗೊತ್ತಿಲ್ಲ. ಇಲ್ಲಿ ಬಿಜೆಪಿ ವಿಪಕ್ಷ ನಾಯಕನಿಲ್ಲ. ಲೋಕಸಭೆಯಲ್ಲಿ ಕಾಂಗ್ರೆಸ್ ನ ವಿಪಕ್ಷ ನಾಯಕ ಇಲ್ಲ ಎಂದು ಟಾಂಗ್ ನೀಡಿದರು.