HomeKarnatakaBIG NEWS : 'ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕರವೇ ರಾಜ್ಯಾಧ್ಯಕ್ಷ...

BIG NEWS : ‘ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ, ಆದರೆ  ಕಾವೇರಿಗಾಗಿ  ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ  ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ, ಇದು ರಾಜಕೀಯ ಪಕ್ಷಗಳು ಸೇರಿಕೊಂಡು ಮಾಡುತ್ತಿರುವ ಬಂದ್. ಕೇಂದ್ರ ಹಾಗೂ ರಾಜ್ಯ ಸರ್ಕಾರ ರಾಜ್ಯದ ಜನರ ಹಿತ ಕಾಪಾಡಬೇಕು. ಎರಡು ದೇಶಗಳ ನಡುವಿನ ಸಮಸ್ಯೆಗಳನ್ನೇ ಪ್ರಧಾನಿಯವರು ಬಗೆಹರಿಸುತ್ತಾರೆ. ಇದು ಎರಡು ರಾಜ್ಯಗಳ ನಡುವಿನ ಸಮಸ್ಯೆ, ಇದನ್ನ ಸುಲಭವಾಗಿ ಬಗೆಹರಿಸಬಹುದು. ಸೋನಿಯಾ ಗಾಂಧಿ ತಮಿಳುನಾಡಿನ ಸಿಎಂ ಸ್ಟಾಲಿನ್ ಹಾಗೂ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಬೇಕು, ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಬೇಕು ಎಂದರು.

ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಮಾಡಲಿದ್ದೇವೆ. ಕೂಡಲೇ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನ ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ  ನಡೆಸಲಿದ್ದೇವೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular