HomeKarnatakaBIG NEWS : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

BIG NEWS : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಲು ಯತ್ನಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮುಂದುವರೆದು ಮಾತನಾಡಿದ ಅವರು ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular