ನಾವು 100 ರೂ. ತೆರಿಗೆ ಕಟ್ಟಿದ್ರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ : ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ.. ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಇಂದು ಹರಿಹರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು 100 ರೂ. ಕಟ್ಟಿದರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ ₹4,30,000 ಕೋಟಿ ತೆರಿಗೆ ಸಂಗ್ರಹವಾದರೆ, ನಮಗೆ 50,257 ಕೋಟಿ ರೂ.ಮಾತ್ರ ಮರಳಿ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ ಎಂದರು.

ಬರನಿರ್ವಹಣೆ ಸಂಬಂಧ ಕುಡಿಯುವ ನೀರು, ಮೇವು, ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂ.ಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜನರು ಗುಳೇ ಹೋಗದಂತೆ ತಪ್ಪಿಸಲು ಹಾಗೂ ಅವರ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ತಾತ್ಕಾಲಿಕ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2,000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ ಎಂದರು.

ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರಪರಿಹಾರ ನೀಡಿಲ್ಲ. ರಾಜ್ಯದ ಬಿಜೆಪಿ ನಾಯಕರು ಕೇವಲ ಭಾಷಣ ಮಾಡುತ್ತಾರೆಯೇ ಹೊರತು, ಕೇಂದ್ರದೊಂದಿಗೆ ಸಂವಹನ ನಡೆಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read