ಸರ್ವಾಧಿಕಾರಿಯನ್ನು ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ; ಪ್ರಧಾನಿ ಮೋದಿ ವಿರುದ್ಧ ಪ್ರಕಾಶ್ ರಾಜ್ ಪರೋಕ್ಷ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ನಟ ಪ್ರಕಾಶ್ ರಾಜ್, ಒಂದೇ ಪಕ್ಷ, ಒಂದೇ ಭಾಷೆ ಎನ್ನುವ ಮಹಾಪ್ರಭು ಎರಡು ನಾಲಿಗೆಯ ಹಾವು ಇದ್ದಂತೆ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕದ ಸಮಸ್ತ ಜನಪರ ಸಂಘಟನೆಗಳು ಸೋಮವಾರದಂದು ಹಮ್ಮಿಕೊಂಡಿದ್ದ ‘ದೇಶ ಉಳಿಸಿ ಸಂಕಲ್ಪ’ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ಈ ದುರಹಂಕಾರಿ ಮತ್ತು ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಎಲೆಕ್ಟ್ರೊರಲ್ ಬಾಂಡ್ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿದ ಪ್ರಕಾಶ್ ರಾಜ್, ಕೊರೊನಾ ಸಂದರ್ಭದಲ್ಲೂ ಸಹ ಕಳಪೆ ಔಷಧಿ ಕಂಪನಿಗಳಿಂದ ನೂರಾರು ಕೋಟಿ ರೂಪಾಯಿಗಳನ್ನು ಸ್ವೀಕರಿಸಲಾಗಿದೆ. ಭ್ರಷ್ಟಾಚಾರ ನಡೆಸಿದವರೆಲ್ಲ ಆ ಪಕ್ಷಕ್ಕೆ ಸೇರ್ಪಡೆಯಾಗಿ ಸಾಚಾಗಳಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read