HomeKarnatakaBIG NEWS : ಪ್ರಾಸಿಕ್ಯೂಷನ್ ಫೈಟ್ : ಹೈಕೋರ್ಟ್ ನಲ್ಲಿ ಪರಿಹಾರ ಸಿಗುವ ಸಂಪೂರ್ಣ...

BIG NEWS : ಪ್ರಾಸಿಕ್ಯೂಷನ್ ಫೈಟ್ : ಹೈಕೋರ್ಟ್ ನಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ-CM ಸಿದ್ದರಾಮಯ್ಯ

ಬೆಂಗಳೂರು : ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ   ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ. ರಾಜಭವನವನ್ನು ಬಳಸಿಕೊಂಡು @BJP4Karnataka, ಜೆಡಿಎಸ್ ಹಾಗೂ ಕೇಂದ್ರ  @BJP4Indiaಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ.

ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ. ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular