‘ಚೈತ್ರಾ ಕುಂದಾಪುರ’ ಡೀಲ್ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು : ‘ಚೈತ್ರಾ ಕುಂದಾಪುರ’ ಡೀಲ್ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಮುಖಂಡೆ ಚೈತ್ರಾ ಕುಂದಾಪುರ ಬಂಧನ ಪ್ರಕರಣದ ಬಗ್ಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ‘ ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು ಎಂದರು.

ಟಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಆದರೆ ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದರು. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಾಗಿದೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಹಿಂದೂ ಸಂಘಟನೆಗೂ ಚೈತ್ರಾ ಕೇಸ್ ಗೂ ತಳಕು ಹಾಕುವುದು ಸರಿಯಲ್ಲ. ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ಈ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read