ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದರು : ಸಿಎಂ ಸಿದ್ದರಾಮಯ್ಯ

ಗೋಕಾಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಅವರು ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ. ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ರಾಯಣ್ಣ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದರು. ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಬೇಕು  ಎಂದರು.

ಸಚಿವರಾದ  ಲಕ್ಷ್ಮೀ ಹೆಬ್ಬಾಳ್ಕರ್ , ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಾ.ಸಣ್ಣಕ್ಕಿ ಅವರು ಈ ವೇಳೆ ಉಪಸ್ಥಿತರಿದ್ದರು.

https://twitter.com/CMofKarnataka/status/1828008729645596724

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read