ಬೆಂಗಳೂರು: ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಹಣವನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಔತಣ ಕೂಟದ ನೆಪದಲ್ಲಿ ಸಚಿವರಿಂದ 300 ಕೋಟಿ ಹಣ ಸಂಗ್ರಹಿಸಿದ್ದಾರೆ. ಬಿಹಾರ ಚುನಾವಣೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ 300 ಕೋಟಿ ರೂಪಾಯಿ ಕಪ್ಪ ಕಾಣಿಕೆ ಸಂಗ್ರಹಿಸಿ ಕೊಟ್ಟಿದ್ದಾರೆ ಎಂದು ಬಿ. ಶ್ರೀರಾಮುಲು ಆರೋಪಿಸಿದ್ದ ಕುರಿತು ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ಕೊಟ್ಟಿದ್ದರು. ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.
