HomeIndiaನಮಗೆ ಬೇಕಿರುವುದು 'ಒಂದು ರಾಷ್ಟ್ರ, ಒಂದು ಚುನಾವಣೆ' ಅಲ್ಲ’: 'ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ...

ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’: ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’: ಕೇಜ್ರಿವಾಲ್

ನವದೆಹಲಿ: ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’, ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಹರಿಯಾಣದ ಭಿವಾನಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಬಿಜೆಪಿ ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದು,. ಬಿಜೆಪಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಹೊಸ ಗಿಮಿಕ್‌ನೊಂದಿಗೆ ಬಂದಿದೆ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಚುನಾವಣೆ ಅಥವಾ 10 ಚುನಾವಣೆಗಳು ಅಥವಾ 12 ಚುನಾವಣೆಗಳಿಂದ ನಮಗೆ ಏನು ಸಿಗುತ್ತದೆ. ನಮಗೆ ‘ಒಂದು ರಾಷ್ಟ್ರ, ಒಂದು ಶಿಕ್ಷಣ’ ಬೇಕು. ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ಸಿಗಬೇಕು. ನಮಗೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಬೇಡ, ಒಂದು ಚುನಾವಣೆ ಅಥವಾ 1000 ಚುನಾವಣೆಗಳು ನಮಗೆ ಮುಖ್ಯವಲ್ಲ ಎಂದು ಅವರು ಪ್ರತಿಪಾದಿಸಿದರು.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ ದೆಹಲಿ ಸಿಎಂ, ಇಂತಹ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ಏನು ಸಿಗುತ್ತದೆ? ದೇಶಕ್ಕೆ ಯಾವುದು ಮುಖ್ಯ? ಒಂದು ರಾಷ್ಟ್ರ ಒಂದು ಚುನಾವಣೆ ಅಥವಾ ಒಂದು ರಾಷ್ಟ್ರ ಒಂದು ಶಿಕ್ಷಣ(ಶ್ರೀಮಂತ ಅಥವಾ ಬಡವರು, ಎಲ್ಲರಿಗೂ ಸಮಾನವಾದ ಉತ್ತಮ ಶಿಕ್ಷಣ) ಒಂದು ರಾಷ್ಟ್ರ ಒಂದು ಚಿಕಿತ್ಸೆ(ಶ್ರೀಮಂತ ಅಥವಾ ಬಡವರು, ಎಲ್ಲರಿಗೂ ಸಮಾನ ಚಿಕಿತ್ಸೆ). ಒನ್ ನೇಷನ್ ಒನ್ ಎಲೆಕ್ಷನ್‌ನಿಂದ? ಸಾಮಾನ್ಯ ಮನುಷ್ಯನಿಗೆ ಏನು ಸಿಗುತ್ತದೆ? ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular